ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅರ್ಧಕೆಜಿ ಚಿನ್ನವನ್ನು ಮಾಗಡಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಗಡಿ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.ಘಟನೆ ಸಂಬಂಧ ಓರ್ವ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.
ಉಂಗುರು ಸೇರಿದಂತೆ ವಿವಿಧ ಚಿನ್ನಾಭರಣಗಳನ್ನು ವಶ ಪಡಿಸಿಕೊಳ್ಳಲಾಗಿದ್ದು, ಚಿಕ್ಕಮಗಳೂರು- ಬೆಂಗಳೂರು ಬಸ್ ನಲ್ಲಿ ಚಿನ್ನ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಸದ್ಯ ಕಂಡಕ್ಟರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಚುನಾವಣಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಸಾಂದರ್ಭಿಕ ಚಿತ್ರ