ಚಿಕ್ಕಮಗಳೂರು ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಣೆ ಮಾಡಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ ತಿಳಿಸಲಾಗಿದೆ.
ಹಿರಿಯರು ಹೊರಬರಬಾರದು, ಅನಿವಾರ್ಯವಾಗಿದ್ದರೆ, ಮನೆಯವರ ಜೊತೆ ಹೋಗಬೇಕು. ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನ ಪಾಲಿಸಬೇಕೆಂದು ಮನವಿ ಮಾಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಿದೆ.