
ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ.
ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದೆ. ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಕಲ್ಲು ತೂರಾಟ ನಡೆಸಿ, ಘೋಷಣೆಗಳನ್ನು ಕೂಗಿ ಯುವಕರು ಎಸ್ಕೇಪ್ ಆಗಿದ್ದಾರೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಸವನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಗಳೂಎರು ಎಸ್ ಪಿ ವಿಕ್ರಂ ಆಮ್ಟೆ, ರಾತ್ರಿ ಮನೆಯೊಂದರ ಮೇಲೆ ಕಿಡಿಗೇಡುಗಳು ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.