
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಉಲ್ಬಣಗೊಳ್ಳುತ್ತಿದೆ. ಕೆ ಎಫ್ ಡಿ ಸೋಂಕಿಗೆ ಮಹಿಳೆಯೋರ್ವರು ಬಲಿಯಾಗಿದ್ದಾರೆ.
ಕಮಲಾ (65) ಮೃತ ಮಹಿಳೆ. ಎನ್.ಆರ್.ಪುರ ತಾಲೂಕಿನ ಕಟ್ಟಿಮನೆ ಗ್ರಾಮದ ನಿವಾಸಿ. ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿಇತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ 51 ಜನರಲ್ಲಿ ಸೋಂಕು ದೃಢಪಟ್ಟಿದೆ. ಕೊಪ್ಪ, ಎನ್.ಆರ್.ಪುರಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಕೊಪ್ಪ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.