ಚಿಕ್ಕಮಗಳೂರು: ಮಲೆನಾಡು ಹಾಗೂ ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು, ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ.
ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಚಿಕ್ಕಮಗಳೂರಿನ ಶೃಂಗೇರಿ ಮೂಲದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರಿನಲ್ಲಿ ವಾರದಲ್ಲಿ ಮೂರು ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿತ್ತು. ಇದೀಗ ಸೋಂಕಿಗೆ ವೃದ್ಧ ಬಲಿಯಾಗಿದ್ದು, ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.