
ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ, ಟ್ರಕ್ಕಿಂಗ್ ಪ್ರಿಯರಿಗೆ ಇಷ್ಟವಾದ ಜಾಗ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಎತ್ತಿನಭುಜ ಪ್ರದೇಶಗಳಲ್ಲಿ ಟ್ರಕ್ಕಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಟ್ರಕ್ಕಿಂಗ್ ನಿಷೇಧಿಸಲಾಗಿದೆ. ಕಳೆದ ವಾರ ಎತ್ತಿನಭುಜದಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡಿದ್ದರು. ನಿಷೇಧಿತ ಪ್ರದೇಶಗಳಲ್ಲಿ ಚಾರಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಳ್ಳಯ್ಯನಗಿರಿ, ಎತ್ತಿನಭುಜ ತಾಣಗಳಲ್ಲಿ ಚಾರಣ ನಿಷೇಧಿಸಲಾಗಿದೆ.
ಇನ್ನು ನಿಷೇಧಿತ ಸ್ಥಳಗಳಲ್ಲಿ ಚಾರಣಕ್ಕೆ ಅವಕಾಶ ನೀಡಿದ್ದ ಅರಣ್ಯ ಇಲಾಖೆ ಸಿಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.