ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ಹಣದ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ.
ಗವನಹಳ್ಳಿ ಧ್ರುವರಾಜ್ ಅರಸ್(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಿಕ್ಕಮಗಳೂರಿನ ಕೋಟೆ ಟ್ಯಾಂಕ್ ಬಳಿ ಘಟನೆ ನಡೆದಿದ್ದು, ಆರೋಪಿ ಪ್ರಮೋದ್ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಹಣದ ವ್ಯವಹಾರದ ಬಗ್ಗೆ ಮಾತನಾಡಲು ಕರೆಸಿಕೊಂಡು ಹಣ ವಸೂಲಿಗೆ ಮುಂದಾಗಿದ್ದ ವೇಳೆ ಗುಂಪುಗಳ ನಡುವೆ ಗಲಾಟೆಯಾಗಿದ್ದು, ಈ ವೇಳೆ ಚಾಕುವಿನಿಂದ ಇರಿದು, ಧ್ರುವರಾಜ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.