alex Certify SHOCKING: ಕ್ರಿಕೆಟ್ ಬೆಟ್ಟಿಂಗ್ ವಿಚಾರಕ್ಕೆ ನಡೆದಿದೆ ನಡೆಯಬಾರದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕ್ರಿಕೆಟ್ ಬೆಟ್ಟಿಂಗ್ ವಿಚಾರಕ್ಕೆ ನಡೆದಿದೆ ನಡೆಯಬಾರದ ಘಟನೆ

ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ಹಣದ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ.

ಗವನಹಳ್ಳಿ ಧ್ರುವರಾಜ್ ಅರಸ್(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಿಕ್ಕಮಗಳೂರಿನ ಕೋಟೆ ಟ್ಯಾಂಕ್ ಬಳಿ ಘಟನೆ ನಡೆದಿದ್ದು, ಆರೋಪಿ ಪ್ರಮೋದ್ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ಹಣದ ವ್ಯವಹಾರದ ಬಗ್ಗೆ ಮಾತನಾಡಲು ಕರೆಸಿಕೊಂಡು ಹಣ ವಸೂಲಿಗೆ ಮುಂದಾಗಿದ್ದ ವೇಳೆ ಗುಂಪುಗಳ ನಡುವೆ ಗಲಾಟೆಯಾಗಿದ್ದು, ಈ ವೇಳೆ ಚಾಕುವಿನಿಂದ ಇರಿದು, ಧ್ರುವರಾಜ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...