alex Certify ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಲಖ್ಯಾ ಸಮೀಪ ನಗರಸಭೆ ಸದಸ್ಯ ಲಕ್ಷ್ಮಣ್ ಅವರಿಗೆ ಸೇರಿದ ಜಮೀನಿನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 90 ಬಾಕ್ಸ್ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿತ್ತು. ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯ ವಶಕ್ಕೆ ಪಡೆದುಕೊಂಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಶುಕ್ರವಾರ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...