ಚಿಕ್ಕಮಗಳೂರು: ರಸ್ತೆ ಬದಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಜೀವನ್, ಚಿಕ್ಕಮಗಳೂರಿನ ವಿನೋದ್ ಬಂಧಿತ ಆರೋಪಿಗಳು. ಗಾಂಜಾ ಮತ್ತಿನಲ್ಲಿ ರಸ್ತೆ ಬದಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ ನಡೆಸಿದ್ದರು. ಕನ್ನಡಕಗಳನ್ನು ಪುಡಿಗಟ್ಟಿ ಬೆದರಿಕೆ ಹಾಕಿ ಕಿಡಿಗೇಡಿಗಳು ಪರಾರಿಯಾಗಿದ್ದರು.
ಹಾಸನ ಜಿಲ್ಲೆ ಬೇಲೂರು ಸಮೀಪದ ಮಾಗಡಿ ಚೆಕ್ ಪೋಸ್ಟ್ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧನದ ವೇಳೆ ಜೀವನ್ ಮತ್ತು ವಿನೋದ್ ಗಾಂಜಾ ಮತ್ತಿನಲ್ಲಿದ್ದರು. ಬಂಧಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ. ಆಂಧ್ರಪ್ರದೇಶ ಮೂಲದ ವ್ಯಾಪಾರಿ ಲಕ್ಷ್ಮಿ ನೀಡಿದ ದೂರಿನ ಅನ್ವಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.