alex Certify ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ : PSI ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ : PSI ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು : ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ PSI ಸೇರಿ 6 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದಿದ್ದು, ಪೊಲೀಸ್ ಠಾಣೆಯ ಪಿಎಸ್ ಐ ಮಹೇಶ್ ಪೂಜಾರಿ ಸೇರಿ ಆರು ಮಂದಿಯನ್ನು ಅಮಾನತು ಮಾಡಿ ಎಸ್ ಪಿ ವಿಕ್ರಂ ಆಮ್ಟೆ ಆದೇಶ ಹೊರಡಿಸಿದ್ದಾರೆ.

ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ಲಾಯರ್ ಮೇಲೆ ಪೋಲಿಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು. ವಕೀಲರು ರಾತ್ರೋರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದು, 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಲಾಗಿತ್ತು, ಈ ಹಿನ್ನೆಲೆ ವಕೀಲರು ಠಾಣೆ ಮುಂದೆ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ಹೊರ ಹಾಕಿದ್ದರು. ಹಲ್ಲೆ ಪ್ರಕರಣ ಸಂಬಂಧ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್ 307, 324, 506, 504ರ ಅಡಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...