ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಬಲ್ ಅರಣ್ಯ ಇಲಾಖೆ ಕ್ವಾಟ್ರಸ್ ನಲ್ಲಿ ಅಧಿಕಾರಿಯೊಬ್ಬ ಪರಸ್ತ್ರೀ ಜೊತೆ ಚಕ್ಕಂದ ಮಾಡುವಾಗಲೇ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯರು ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಕೊಪ್ಪ ವಿಭಾಗದ ಕಳಸ ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿ ಸುಳ್ಳು ಕೇಸು ದಾಖಲಿಸುವ ಬೆದರಿಕೆ ಹಾಕಿ ಮಹಿಳೆಯರನ್ನು ವಂಚಿಸುತ್ತಿದ್ದ ಎನ್ನಲಾಗಿದೆ.
ಹೀಗೆ ಮರ ಕಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ ವಿರುದ್ದ ಕೇಸು ದಾಖಲಿಸಿದ್ದು, ಕೇಸ್ ವಾಪಸ್ ಪಡೆಯಲು ತನ್ನೊಂದಿಗೆ ಸಹಕರಿಸುವಂತೆ ಹೇಳಿದ್ದಾನೆ. ಕ್ವಾಟರ್ಸ್ ಗೆ ಮಹಿಳೆಯನ್ನು ಕರೆಸಿಕೊಂಡು ಚಕ್ಕಂದವಾಡುವುದಾಗಲೀ ಮಹಿಳೆಯ ಪತಿ ಮತ್ತು ಸ್ಥಳೀಯರು ದಾಳಿ ಮಾಡಿದ್ದಾರೆ. ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರತಿಭಟನೆ ನಡೆಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಾಳೂರು ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.
ಅಧಿಕಾರಿಯನ್ನು ಠಾಣೆಗೆ ಕರೆದೊಯ್ದ ಪೊಲೀಸರು ಕೇಸು ದಾಖಲಿಸಿದ್ದಾರೆ. ಅನೈತಿಕ ಚಟುವಟಿಕೆ ನಡೆಸುತ್ತಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.