alex Certify BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಸಹಿತವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಕಳೆದ ಒಂದು ವಾರದಿಂದಲೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ, ಎನ್.ಆರ್. ಪುರ, ಕಡೂರು, ತರೀಕೆರೆ, ಕಳಸ ತಾಲೂಕಿನಲ್ಲಿ ಮಳೆಯಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಿಂದ ರಭಸವಾಗಿ ಮಳೆ ನೀರು ಹರಿಯುತ್ತಿರುವುದರಿಂದ ಎನ್ಆರ್ ಪುರ ತಾಲೂಕಿನ ಮಾಗುಂಡಿ ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.

ಶಿವಮೊಗ್ಗ, ಭದ್ರಾವತಿ, ದಾವಣಗೆರೆ ಭಾಗದ ಹಲವೆಡೆ ಧಾರಾಕಾರ ಮಳೆಯಾಗಿದೆ. ಹೆಚ್ಚಿನ ಮಾಜಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...