ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದೇವರ ಮನೆ, ಮಾಣಿಕ್ಯಧಾರಾ, ಎತ್ತಿನ ಭುಜ, ಸಿರಿಮನೆ ಫಾಲ್ಸ್ ಗೆ ನಿರ್ಬಂಧ ವಿಧಿಸಲಾಗಿತ್ತು. ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿರ್ಬಂಧ ಸಡಿಲಿಕೆ ಮಾಡಿದೆ.
ಚಂದ್ರದ್ರೋಣ ಪರ್ವತದ ಸಾಲು ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಿಂದ ಭೂ ಕುಸಿತ, ಗುಡ್ಡ ಕುಸಿತ ಕಾರಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಮಳೆ ಸಂಪೂರ್ಣ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರವಾಸಿಗಳಿಗೆ ಅವಕಾಶ ಕಲ್ಪಿಸಲಾಗಿದೆ.