
ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಅವಾಂತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸುತ್ತಿದೆ.
ಚಿಕ್ಕಮಗಳೂರಿನಲ್ಲಿ ರಸ್ತೆ ಮಾರ್ಗದಲ್ಲಿಯೇ ಭೂ ಕುಸಿತ ಸಂಭವಿಸಿದ್ದು, ಲಾರಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. 50 ಅಡಿ ಆಳದ ಕಂದಕಕ್ಕೆ ಲಾರಿ ಬಿದ್ದಿದ್ದು, ಲಾರಿ ಚಾಲಕ ಜಸ್ಟ್ ಎಸ್ಕೇಪ್ ಆಗಿದ್ದಾನೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿ ನೆಮ್ಮಾರು ಬಳಿ ಈ ಘಟನೆ ನಡೆದಿದೆ. ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸದ್ಯ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.