ಬೆಳಗಾವಿ: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲಿಸ್ ಸಿಬ್ಬಂದಿಗಳ ಹಲ್ಲೆ ಪ್ರಕರಣ ಖಂಡಿಸಿ ವಕೀಲರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಅಧಿವೇಶನಕ್ಕೂ ವಕೀಲರ ಪ್ರತಿಭಟನೆ ಬಿಸಿ ತಟ್ಟಿದೆ. ವಕೀಲನ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಜಿಲ್ಲಾ ವಕೀಲರ ಸಂಘ ಪ್ರತಿಭಟನೆ ನಡೆಸಿದ್ದು, ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದೆ.
ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗು ವಕೀಲರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.
ಇದೇ ವೇಳೆ ಮೈಸೂರು ಹಾಗೂ ಚಿಕ್ಕಮಗಳೂರಿನಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದು, ಹಲವೆಡೆ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.