ಚಿಕ್ಕಮಗಳೂರು : ಚಿಕ್ಕಮಗಳೂರಿನ ದೇವಿರಮ್ಮನ ಬೆಟ್ಟದಿಂದ ಜಾರಿಬಿದ್ದು ಯುವಕನಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಇರುವ ದೇವಿರಮ್ಮನ ಬೆಟ್ಟ ಹತ್ತುವ ವೇಳೆ ಯುವಕ ಜಾರಿ ಬಿದ್ದಿದ್ದು, ಗಂಭೀರ ಗಾಯಗಳಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಕಿಮೀ ಯುವಕನನ್ನು ಹೊತ್ತೊಯ್ದು ನಂತರ ಆಂಬುಲೆನ್ಸ್ ಮೂಲಕ ಚಿಕ್ಕಮಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ದೇವಾಲಯದಲ್ಲಿ ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡಲಾಗುತ್ತದೆ. ಭಕ್ತರು ಮೂರು ಸಾವಿರ ಅಡಿ ಬೆಟ್ಟ ಹತ್ತಿ ದೇವರ ದರ್ಶನ ಪಡೆಯುತ್ತಾರೆ. ಈ ಹಿನ್ನೆಲೆ ಈ ಬಾರಿ ಸಾವಿರಾರು ಭಕ್ತರು ಬೆಟ್ಟ ಏರಿ ದರ್ಶನ ಪಡೆಯಲಿದ್ದಾರೆ.