ಚಿಕ್ಕೋಡಿ: ನಗರದ ಖಾಸಗಿ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಆಕ್ರೋಶಗೊಂಡ ಪೋಷಕರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅತಿಥಿ ಉಪನ್ಯಾಸಕ ರಾಹುಲ್ ಓತಾರಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ನೊಂದ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಕಾಲೇಜಿಗೆ ಬಂದ ವಿದ್ಯಾರ್ಥಿನಿಯ ಪೋಷಕರು ಈ ಬಗ್ಗೆ ಅತಿಥಿ ಉಪನ್ಯಾಸಕನನ್ನು ಪ್ರಶ್ನಿಸಿದ್ದಾರೆ. ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಯುವತಿಯರ ಅಶ್ಲೀಲ ಫೋಟೋಗಳು ಪತ್ತೆಯಾಗಿವೆ. ಅತಿಥಿ ಉಪನ್ಯಾಸಕನನ್ನು ಥಳಿಸಿದ ಪೋಷಕರು ಪೊಲೀಸರಿಗೆ ಒಪ್ಪಿಸಿದ್ದಾರೆ.