
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಲವು ಐಎ ಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ವರ್ಗಾವಣೆ ಮಾಡಿದ್ದು, ಚಿಕ್ಕಮಗಳೂರು ನೂತನ ಡಿಸಿ ಆಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿದೆ.