
ಚಿಕ್ಕಮಗಳೂರು: ಗುರು ದತ್ತಾತ್ರೇಯ ಬಾಬಬುಡನ್ ಗಿರಿ ದರ್ಗಾದಲ್ಲಿ ಉರುಸ್ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂದವರು ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಮಾರ್ಚ್ 15 ರಿಂದ 17ರ ವರೆಗೆ ಉರುಸ್ ಕಾರ್ಯ ಹಿನ್ನೆಲೆಯಲ್ಲಿ ರಜಯದ ವಿವಿಧ ಭಾಗಗಳಿಂದ ಮುಸ್ಲಿಂ ಬಾಂಧವರು ಬಾಬಾಬುಡನ್ ಗಿರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಚಿಕ್ಕಮಗಳೂರಿನ ಪ್ರವಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಿದೆ.
ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ ಮತ್ತು ಮಾಣಿಕ್ಯಧಾರಾಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.