ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹೆದ್ದೂರು ಗ್ರಾಮದಲ್ಲಿ ಅಡಿಕೆ ನುಂಗಿದ ಒಂದು ವರ್ಷದ ಮಗು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸಂದೇಶ್ ಮತ್ತು ಅರ್ಚನಾ ದಂಪತಿಯ ಪುತ್ರ ನಿಶಾನ್ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಆರೋಗ್ಯ ಇಲಾಖೆ ಆಯೋಜಿಸಿದ್ದ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಆರೋಗ್ಯವಂತ ಮಗು ಪುರಸ್ಕಾರ ಪಡೆದುಕೊಂಡಿದ್ದ ನಿಶಾನ್ ಒಣಗಲು ಹಾಕಿದ್ದ ಅಡಿಕೆ ನುಂಗಿ ಅಸ್ವಸ್ಥಗೊಂಡಿದ್ದು, ಪೋಷಕರು ಕೂಡಲೇ ತೀರ್ಥಹಳ್ಳಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.