alex Certify ಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರು: ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಮೃತಪಟ್ಟ ಮಗು ಎಂದು ಹೇಳಲಾಗಿದೆ.

ಜಗದೀಶ್ BMRCL ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದಾಗ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...