
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪ ಎಮ್ಮೆಹಟ್ಟಿ ಗ್ರಾಮದ ಮಗು ಬಿಸಿ ಸಾಂಬಾರಿನ ಪಾತ್ರೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
10 ದಿನಗಳ ಹಿಂದೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪೋಷಕರೊಂದಿಗೆ ಎರಡು ವರ್ಷದ ಮಗು ಭಾಗಿಯಾಗಿದ್ದು, ಈ ವೇಳೆ ಬಿಸಿ ಸಾಂಬಾರಿನ ಪಾತ್ರೆ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ ಎನ್ನಲಾಗಿದೆ.