
ರಾಮನಗರ: ಮಗು ಹಠ ಮಾಡಿದ್ದಕ್ಕೆ ಮಗುವಿನ ಡೈಪರ್ ಒಳಗೆ ಖಾರದಿ ಪುಡಿ ಹಾಕಿ, ಕೈಗೆ ಬರೆ ಕೊಟ್ಟು ಚಿತ್ರಹಿಂಸೆ ನೀಡಿದ್ದ ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ದೀಕ್ಷಿತ್ ಎಂಬ 2 ವರ್ಷದ ಮಗು ಹಠ ಮಾಡಿದ್ದಕ್ಕೆ ಕನಕಪುರ ತಾಲೂಕಿನ ಮಹಾರಾಜಕಟ್ಟಿಯ ಅಂಗನವಾಡಿ ಸಹಾಯಕಿ ಚಂದ್ರಮ್ಮ ಮಗುವಿನ ಡೈಪರ್ ಒಳಗೆ ಖಾರದ ಪುಡಿ ಹಾಕಿ, ಕೈಗಳಿಗೆ ಬರೆಕೊಟ್ಟು ವಿಕೃತಿ ಮೆರೆದಿದ್ದಳು.
ಮಧ್ಯಾಹ್ನ ಮಗುವನ್ನು ಮನೆಗೆ ಕರೆದುಕೊಂಡು ಹೋಗಲು ಪೋಷಕರು ಅಂಗನವಾಡಿ ಬಳಿ ಬಂದಾಗ ವಿಷಯ ಗೊತ್ತಾಗಿದೆ. ತಕ್ಷಣ ಪೋಷಕರು ಕನಕಪುರ ಟೌನ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಲಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಅಂಗನವಾಡಿ ಸಹಾಯಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಸಹಾಯಕಿ ಚಂದ್ರಮ್ಮಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.