alex Certify ಗರ್ಭಿಣಿಯಾಗಿರುವುದನ್ನು ತಿಳಿಸಿದ ಹುಡುಗಿ, ಮದುವೆಯಾದ ಯುವಕನಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯಾಗಿರುವುದನ್ನು ತಿಳಿಸಿದ ಹುಡುಗಿ, ಮದುವೆಯಾದ ಯುವಕನಿಗೆ ಬಿಗ್ ಶಾಕ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗ್ರಾಮ ಒಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಗರ್ಭಿಣಿಯಾಗಲು ಕಾರಣನಾಗಿದ್ದ ಯುವಕ ನಂತರ ಆಕೆಯನ್ನು ಮದುವೆಯಾಗಿದ್ದಾನೆ. ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

4 ವರ್ಷದ ಹಿಂದೆ ಬಾಲಕಿಯ ತಾಯಿ ಮೃತಪಟ್ಟಿದ್ದು, ಪ್ರೌಢಶಾಲೆ ಓದುತ್ತಿದ್ದ ಬಾಲಕಿ ಓದುವುದನ್ನು ನಿಲ್ಲಿಸಿ ತಂದೆ ಮತ್ತು ಅಣ್ಣನೊಂದಿಗೆ ವಾಸವಾಗಿದ್ದಾಳೆ. ಅದೇ ಗ್ರಾಮದ ಯುವಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಬಾಲಕಿ ಗರ್ಭಿಣಿಯಾಗಿರುವುದನ್ನು ತಿಳಿಸಿದ ನಂತರ ಮಾರ್ಚ್ 14ರಂದು ಕರೆದುಕೊಂಡು ಹೋಗಿ ಸ್ನೇಹಿತನ ಮನೆಯಲ್ಲಿ ಉಳಿಸಿಕೊಂಡಿದ್ದಾನೆ. ಮಾರನೇ ದಿನ ದೇವಾಲಯ ಒಂದರಲ್ಲಿ ಮದುವೆಯಾಗಿದ್ದಾನೆ. ಯುವಕನ ವಿರುದ್ಧ ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...