alex Certify ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್

ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ.

ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮದುವೆ ನಿಗದಿಯಾಗಿತ್ತು. ಮಕ್ಕಳ ಸಹಾಯವಾಣಿಗೆ ಬಂದ ಕರೆಯ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ಗ್ರಾಮಕ್ಕೆ ತೆರಳಿದ್ದು, ನಿಗದಿಯಾಗಿದ್ದ ಮದುವೆಯನ್ನು ತಡೆದಿದ್ದಾರೆ.

ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಅಪ್ರಾಪ್ತೆಯನ್ನು ಬಾಲಮಂದಿರಕ್ಕೆ ದಾಖಲಿಸಲಾಗಿದೆ. ಬಾಲ್ಯವಿವಾಹ ಮಾಡದಂತೆ ಪೋಷಕರಿಗೆ ತಾಕೀತು ಮಾಡಲಾಗಿದೆ. ತಹಶೀಲ್ದಾರ್ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರು ಬಾಲ್ಯವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...