alex Certify ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆಯಾಗಿದೆ. ಬಿಡಿಪುರದ ಆವಲಪಾಳ್ಯದಲ್ಲಿ 16 ವರ್ಷದ ಬಾಲಕಿ ಮೃತದೇಹ ಪತ್ತೆಯಾಗಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಆವಲಪಾಳ್ಯದಲ್ಲಿ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ದಂಪತಿಯ ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಪತಿ ಲಕ್ಷ್ಮಿಪತಿ ವಿರುದ್ಧ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪತಿಯೇ ಕೊಲೆ ಮಾಡಿ ನೇಣು ಬಿಗಿದಿರುವುದಾಗಿ ಆರೋಪಿಸಲಾಗಿದೆ.

ಎಸ್ಎಸ್ಎಲ್ಸಿ ಓದುತ್ತಿದ್ದ ಬಾಲಕಿಯನ್ನು ಪೋಷಕರು ಮದುವೆ ಮಾಡಿದ್ದರು. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...