
ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದು, ಆತನನ್ನು ಅಮಾನತು ಮಾಡಲಾಗಿದೆ.
ಬಾಲ್ಯ ವಿವಾಹವಾಗಿದ್ದ ಶಿಕ್ಷಕನ ವಿರುದ್ಧ ಮೆಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಡಿಪಿಐ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಹಲಸಿ ತೂಗಾಂವ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂದೀಪಕುಮಾರ ಅಮಾನತುಗೊಂಡವರು. ಶಿಕ್ಷಕನ ಕರ್ತವ್ಯಲೋಪ, ದುರ್ನಡತೆಯಿಂದ ಶಿಕ್ಷಣ ಇಲಾಖೆ ಮುಜುಗರಕ್ಕೆ ಒಳಗಾಗಿದ್ದು, ನಾಗರೀಕ ಸೇವಾ ನಿಯಮಾವಳಿ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ಸಲೀಂ ಪಾಶಾ ತಿಳಿಸಿದ್ದಾರೆ.