alex Certify ಪ್ರೌಢಶಾಲೆ ವಿದ್ಯಾರ್ಥಿನಿ ಮದುವೆಯಾದ ಶಿಕ್ಷಕನಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೌಢಶಾಲೆ ವಿದ್ಯಾರ್ಥಿನಿ ಮದುವೆಯಾದ ಶಿಕ್ಷಕನಿಗೆ ಶಾಕ್

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದು, ಆತನನ್ನು ಅಮಾನತು ಮಾಡಲಾಗಿದೆ.

ಬಾಲ್ಯ ವಿವಾಹವಾಗಿದ್ದ ಶಿಕ್ಷಕನ ವಿರುದ್ಧ ಮೆಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಡಿಪಿಐ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಹಲಸಿ ತೂಗಾಂವ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂದೀಪಕುಮಾರ ಅಮಾನತುಗೊಂಡವರು. ಶಿಕ್ಷಕನ ಕರ್ತವ್ಯಲೋಪ, ದುರ್ನಡತೆಯಿಂದ ಶಿಕ್ಷಣ ಇಲಾಖೆ ಮುಜುಗರಕ್ಕೆ ಒಳಗಾಗಿದ್ದು, ನಾಗರೀಕ ಸೇವಾ ನಿಯಮಾವಳಿ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ಸಲೀಂ ಪಾಶಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...