alex Certify ದಟ್ಟ ಅರಣ್ಯದಲ್ಲಿ ನಿತ್ರಾಣ ಸ್ಥಿತಿಯಲ್ಲಿತ್ತು ನಾಪತ್ತೆಯಾಗಿದ್ದ ಮಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಟ್ಟ ಅರಣ್ಯದಲ್ಲಿ ನಿತ್ರಾಣ ಸ್ಥಿತಿಯಲ್ಲಿತ್ತು ನಾಪತ್ತೆಯಾಗಿದ್ದ ಮಗು

ಬೆಳಗಾವಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗು ದಟ್ಟಾರಣ್ಯದಲ್ಲಿ ಪತ್ತೆಯಾಗಿದೆ. ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಮೂರು ವರ್ಷದ ಮಗು ಅದಿತಿ ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಜಾಂಬೋಟಿ ಅರಣ್ಯದಲ್ಲಿ ಏಪ್ರಿಲ್ 26 ರಂದು ಚಿರೇಖಾನಿ ಗ್ರಾಮದ ಮಗು ನಾಪತ್ತೆಯಾಗಿತ್ತು. ತಾವರಗಟ್ಟೆ ಗ್ರಾಮದ ಶಿವಾಜಿ ಅವರ ಮಗು ಅದಿತಿ ಅಜ್ಜಿ ಮನೆಗೆ ಬಂದಿದ್ದು, ಆಟವಾಡುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದು, ಮಗುವಿಗಾಗಿ ಹುಡುಕಾಟ ನಡೆಸಲಾಗಿತ್ತು.

ಏಪ್ರಿಲ್ 29ರಂದು ಖಾನಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿ ಸುತ್ತಮುತ್ತಲಿನ ಗ್ರಾಮಗಳು, ಅರಣ್ಯ ಪ್ರದೇಶದಲ್ಲಿ ಶೋಧಕಾರ್ಯ ಕೈಗೊಳ್ಳಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಜಾಂಬೋಟಿ ಅರಣ್ಯದಲ್ಲಿ ಹುಡುಕಾಟ ನಡೆಸಿದಾಗ ಮರವೊಂದರ ಕೆಳಗೆ ನಿತ್ರಾಣ ಸ್ಥಿತಿಯಲ್ಲಿ ಮಗು ಪತ್ತೆಯಾಗಿದೆ.

ಪೊಲೀಸರು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಬಾಲಕಿ ಚೇತರಿಸಿಕೊಂಡಿದ್ದಾಳೆ. ಮಗು ದಟ್ಟ ಅರಣ್ಯಕ್ಕೆ ಹೋಗಿದ್ದು ಹೇಗೆ ಎಂಬ ಆಯಾಮದಲ್ಲಿ ಮಗು ನಾಪತ್ತೆಯಾಗಿದ್ದ ಪ್ರಕರಣದ ಬಗ್ಗೆ ಖಾನಾಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಗು ಚೇತರಿಸಿಕೊಂಡ ಬಳಿಕ ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...