
ಮೈಸೂರು: ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನಟರಾಜ ಅವರ ಒಂದೂವರೆ ವರ್ಷದ ಮಗು ದಯಾನಂದ್ ಮೃತಪಟ್ಟ ಮಗು ಎಂದು ಹೇಳಲಾಗಿದೆ. ನಿರ್ಮಾಣ ಹಂತದ ಮನೆ ಬಳಿ ಅಕ್ಕನ ಜೊತೆ ಆಟವಾಡುತ್ತಿದ್ದ ದಯಾನಂದ್ ಅಕ್ಕ ಮನೆಯ ಒಳಗೆ ಹೋಗಿ ಬರುವಷ್ಟರಲ್ಲಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.