ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ.
ದೇವರಾಜ್ ಮತ್ತು ಅನುಷಾ ದಂಪತಿಯ 11 ತಿಂಗಳ ಮಗು ಅಕ್ಷಯ್ ಮನೆಯ ಮುಂದಿನ ನೀರಿನ ತೊಟ್ಟಿಯಲ್ಲಿ ಬಿದ್ದಿದೆ. ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಮನೆಯವರು ವಾಹನ ತೊಳೆಯುವ ವೇಳೆ ಅಂಬೆಗಾಲು ಇಡುತ್ತಾ ಬಂದ ಮಗು ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದಿದೆ. ಇದನ್ನು ಮನೆಯವರು ಗಮನಿಸಿಲ್ಲ.
ಸ್ವಲ್ಪ ಹೊತ್ತಿನ ಬಳಿಕ ಮಗುವನ್ನು ನೀರಿನ ತೊಟ್ಟಿಯಲ್ಲಿ ನೋಡಿದ ಮನೆಯವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಈ ವೇಳೆಗಾಗಲೇ ಮಗು ಮೃತಪಟ್ಟಿತ್ತು ಎನ್ನಲಾಗಿದೆ. ಮಗುವನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮಗುವಿನ ಸಾವಿಗೆ ಇಡೀ ಗ್ರಾಮದ ಜನ ಕಂಬನಿ ಮಿಡಿದಿದ್ದಾರೆ.