ಬೆಂಗಳೂರು: ಮಗುವನ್ನು ಹತ್ಯೆ ಮಾಡಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಎಸ್ಆರ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗ್ಗೆ 10 ವರ್ಷದ ಮಗನನ್ನು ಸಂಪ್ ಗೆ ಎಸೆದಿದ್ದ ಸುರೇಶ್ ಮೃತದೇಹ ಸಂಜೆ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಮಗ ಬುದ್ಧಿಮಾಂಧ್ಯ ಇದ್ದ ಕಾರಣಕ್ಕೆ ಮನೆಯಲ್ಲಿ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ ಸುರೇಶ್ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.
ಆಗಾಗ ಪತ್ನಿಯ ಜೊತೆ ಗಲಾಟೆ ಮಾಡುತ್ತಿದ್ದ ಸುರೇಶ್ ನಿನ್ನೆ ರಾತ್ರಿ ಕೂಡ ಪತ್ನಿಯೊಂದಿಗೆ ಗಲಾಟೆ ಮಾಡಿದ್ದು, ಬೆಳಗ್ಗೆ 5 ಗಂಟೆಗೆ ಮಗುವನ್ನು ಸಂಪ್ ಗೆ ಎಸೆದಿದ್ದಾರೆ. ಘಟನೆಯ ಸಂಬಂಧ ಎಸ್ಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಶೇಷಾದ್ರಿಪುರಂ ರೈಲ್ವೆ ಹಳಿ ಬಳಿ ನೇಣುಹಾಕಿಕೊಂಡು ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೇಷಾದ್ರಿಪುರಂ ಠಾಣೆಯ ಪೊಲೀಸರು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದಾಗ ಸುರೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎನ್ನಲಾಗಿದೆ.