alex Certify BREAKING: ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಮೃತಪಟ್ಟ ಘಟನೆ ನಡೆದಿದೆ.

ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ಇಮ್ರಾನ್ ಎಂಬುವರ ಪುತ್ರ ಐಯಾನ್(3) ಮೃತಪಟ್ಟ ಮಗು ಎಂದು ಹೇಳಲಾಗಿದೆ.

ಸರ್ಕಾರಿ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ಇಮ್ರಾನ್ ಅವರ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ವಿಚಾರಿಸಲು ಬಂದಿದ್ದರು. ಆಟವಾಡುತ್ತಾ ಹೊರಗೆ ಬಂದಿದ್ದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ ಎನ್ನಲಾಗಿದೆ.

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ತೊಟ್ಟಿಯ ಮುಚ್ಚಳ ಮುಚ್ಚದ ಕಾರಣ ದುರಂತ ಸಂಭವಿಸಿದೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿ ನೀಡಿರ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...