ಹಾಸನ: ಶಾಲೆಗೆ ಹೋಗುವುದಾಗಿ ಹೇಳಿದ್ದ ಮೂವರು ಮಕ್ಕಳು ನಾಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊನಿಗಾನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಶರತ್(16), ಧನಂಜಯ(16), ಮುರಳಿ(16) ನಾಪತ್ತೆಯಾದ ಮಕ್ಕಳು. ನಿನ್ನೆ ಬೆಳಗ್ಗೆ 7.30ಕ್ಕೆ ಮನೆಯಿಂದ ಶಾಲೆಗೆ ಹೋಗಿದ್ದ ಮೂವರು ನಾಪತ್ತೆಯಾಗಿದ್ದಾರೆ. ಪೋಷಕರಲ್ಲಿ ಆತಂಕ ಮೂಡಿದೆ.
ಮೂವರು ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಪೋಷಕರಿಗೆ ಕರೆ ಮಾಡಿ ಶಿಕ್ಷಕರು ಮಾಹಿತಿ ನೀಡಿದ್ದಾರೆ. ತಮ್ಮ ಮಕ್ಕಳಿಗಾಗಿ ಪೋಷಕರು ಗ್ರಾಮದಲ್ಲಿ ಹುಡುಕಾಟ ನಡೆಸಿದ್ದು, ರಾತ್ರಿಯಾದರೂ ಮಕ್ಕಳು ಮನೆಗೆ ಬಂದಿಲ್ಲ. ಶರತ್ ಬಳಿ ಇರುವ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.
ಕೊನಿಗಾನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಹುಣಸೆ ಗ್ರಾಮದ ಮಹೇಂದ್ರ ಎಂಬುವವರ ಮಕ್ಕಳು ನಾಪತ್ತೆಯಾಗಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.