ನವದೆಹಲಿ: ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದೆ. 7.4 ಕೋಟಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುವುದು.
ರಾಜ್ಯದಲ್ಲಿ ಈ ವಯೋಮಿತಿಯ ಸುಮಾರು 31.75 ಲಕ್ಷ ಮಕ್ಕಳಿದ್ದು, ಮೊದಲ ದಿನ 6 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ಡೋಸ್ ನೀಡಿದ 28 ದಿನದ ಅಂತರದಲ್ಲಿ ಎರಡನೇ ಡೋಸ್ ನೀಡಲಾಗುವುದು. ಶಾಲಾ-ಕಾಲೇಜುಗಳಲ್ಲಿ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. ಶಾಲೆಗಳಲ್ಲಿ ಲಸಿಕೆ ಪಡೆಯಲು ಸಾಧ್ಯವಾಗದ ಮಕ್ಕಳಿಗೆ ಸಮೀಪದ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ.