alex Certify BIG NEWS: ಇಂದಿನಿಂದ ದೇಶಾದ್ಯಂತ 15 -18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ದೇಶಾದ್ಯಂತ 15 -18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ

ನವದೆಹಲಿ: ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದೆ. 7.4 ಕೋಟಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುವುದು.

ರಾಜ್ಯದಲ್ಲಿ ಈ ವಯೋಮಿತಿಯ ಸುಮಾರು 31.75 ಲಕ್ಷ ಮಕ್ಕಳಿದ್ದು, ಮೊದಲ ದಿನ 6 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ಡೋಸ್ ನೀಡಿದ 28 ದಿನದ ಅಂತರದಲ್ಲಿ ಎರಡನೇ ಡೋಸ್ ನೀಡಲಾಗುವುದು. ಶಾಲಾ-ಕಾಲೇಜುಗಳಲ್ಲಿ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. ಶಾಲೆಗಳಲ್ಲಿ ಲಸಿಕೆ ಪಡೆಯಲು ಸಾಧ್ಯವಾಗದ ಮಕ್ಕಳಿಗೆ ಸಮೀಪದ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...