ಬೆಂಗಳೂರು: ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿದೆ.
9 ವರ್ಷದ ಅರ್ಷಲ್ ಖಾನ್, 7 ವರ್ಷದ ಅಮೀನ್ ಖಾನ್ ಮೃತಪಟ್ಟ ಮಕ್ಕಳು. ಅಕ್ಟೋಬರ್ 27ರ ಸಂಜೆಯಿಂದ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಬೇಸ್ಮೆಂಟ್ ನಲ್ಲಿ ಸಂಗ್ರಹವಾಗಿದ್ದ ನೀರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮಕ್ಕಳನ್ನು ಹೊರಗೆ ತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.