ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇನ್ಮುಂದೆ ಪುಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ದ್ವಿಚಕ್ರವಾಹನದಲ್ಲಿ ಮಕ್ಕಳನ್ನು ಶಾಲೆಗೆ ಬಿಡುವಾಗ ಹಾಗೂ ಶಾಲೆಯಿಂದ ವಾಪಾಸ್ ಕರೆತರುವಾಗ ಮಕ್ಕಳಿಗೂ ಹೆಲ್ಮೆಟ್ ಧರಿಸಿರಬೇಕು.
ಇನ್ನು ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದೊಯ್ಯುವ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಆದೆಶ ಹೊರಡಿಸಿದ್ದಾರೆ.