alex Certify ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ.

ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಮಂಜುಳಾ, ಮಧುಕುಮಾರ್, ಮಹಾಲಕ್ಷ್ಮಿ, ಭಾನು ನಾಪತ್ತೆಯಾದವರು. ಗ್ರಾಮದಿಂದ ನಾಪತ್ತೆಯಾಗಿರುವ ಎಲ್ಲಾ ಮಕ್ಕಳು 15 ವರ್ಷದೊಳಗಿನವರಾಗಿದ್ದಾರೆ.

ಶನಿವಾರ ಮಧ್ಯಾಹ್ನ ಮನೆಯಿಂದ ಹೊರ ಹೋದವರು ವಾಪಸ್ ಬಂದಿಲ್ಲ. ಎಲ್ಲಾ ಕಡೆ ಹುಡುಕಿದರೂ ಸಿಗದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಕ್ಕಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...