alex Certify ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.

ತಾಯಿ ಸರಸ್ವತಿ(27), ಪುತ್ರಿಯರಾದ ದೀಪಿಕಾ(7), ರಿತಿಷಾ(4) ನಾಲ್ಕು ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಸರಸ್ವತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2016ರಲ್ಲಿ ಸಾಂಗ್ಲಿಯ ನಿತಿನ್ ಕಿರವೆ ಜೊತೆ ಸರಸ್ವತಿ ಮದುವೆಯಾಗಿತ್ತು. ಗಂಡನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿಕೊಂಡಿದ್ದರು. ಬಾವಿಯಿಂದ ಮೂವರ ಶವಗಳನ್ನು ಪೊಲೀಸರು ಹೊರ ತೆಗೆದಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...