ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಶೇ.5 ರಷ್ಟು ಶುಲ್ಕ ವಿನಾಯಿತಿ ಹಾಗೂ ಶೇ.3ರಷ್ಟು ಅಂಧ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಮೀಸಲಾತಿ ಪಡೆದ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿವಿಯ ಕುಲಸಚಿವರು ತಿಳಿಸಿದ್ದಾರೆ.