ಬೀದರ: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ PM CARES for Children ಎಂಬ ಹೊಸ ಯೋಜನೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದಿಂದ ದಿ:11-03-2020ರ ನಂತರ ಇಬ್ಬರು ಪೋಷಕರನ್ನು/ಉಳಿದ ಪೋಷಕರನ್ನು (Surviving Parent)/ ಕಾನೂನು ಬದ್ಧ/ದತ್ತು ಪೋಷಕರನ್ನು ಕಳೆದುಕೊಂಡಿರುವ 18 ವರ್ಷದೊಳಗಿನ ಮಕ್ಕಳಿಗೆ ಪಾಲನೆ ಮತ್ತು ರಕ್ಷಣೆ ಒಳಗೊಂಡಂತೆ ಅವರ ಆರೋಗ್ಯ ವಿಮೆ, ಶಿಕ್ಷಣ ಮತ್ತು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಜೀವನ ನಿರ್ವಹಿಸಲು ಅನುವಾಗುವಂತೆ ತಕ್ಷಣ ನೆರವು ಜೊತೆಗೆ ಪ್ರತಿ ಮಗುವಿಗೆ 23 ವರ್ಷ ತುಂಬಿದ ನಂತರ ತಲಾ 10 ಲಕ್ಷಗಳನ್ನು ನೀಡಲು ಪ್ರಧಾನ ಮಂತ್ರಿ PM CARES for Children ಎಂಬ ಹೊಸ ಯೋಜನೆಯನ್ನು ಘೋಷಿಸಿರುತ್ತಾರೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಲ್ಯಾಂಡ್ ಆರ್ಮಿ ಕಛೇರಿ ಹಿಂದುಗಡೆ, ಮೈಲೂರ, ಬೀದರ. ದೂ.ಸಂ08482-234003/9980891432/9886235654ಗೆ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.