ಬೆಂಗಳೂರು: ಕೊರೋನಾ ಮೂರನೇ ಅಲೆ ಬರುವುದಕ್ಕೆ ಮೊದಲು ಮಕ್ಕಳಿಗೆ ನ್ಯೂಟ್ರಿಷನ್ ಕಿಟ್ ವಿತರಿಸಲಾಗುತ್ತದೆ.
ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಬಾದಾಮಿ ಪುಡಿ, ಹಾಲಿನ ಪುಡಿ, ಬಿಸ್ಕೆಟ್, ಮಲ್ಟಿವಿಟಮಿನ್ ಸಿರಪ್, ಡ್ರೈಫ್ರೂಟ್ಸ್ ಒಳಗೊಂಡ ಕಿಟ್ ಗಳನ್ನು ಮಕ್ಕಳಿಗೆ ವಿತರಿಸಲಾಗುತ್ತದೆ. ವಿಪತ್ತು ನಿರ್ವಹಣಾ ನಿಧಿಯಡಿ ಹಣ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಸುಮಾರು 1 ಸಾವಿರದಿಂದ 3 ಸಾವಿರದವರೆಗೆ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿದ್ದಾರೆ. ಸಮೀಕ್ಷೆಯನ್ನು ಆರಂಭಿಸಲಾಗಿದ್ದು, ಶೀಘ್ರ ಕಿಟ್ ವಿತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.