ಹಾವೇರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 89 ಮಕ್ಕಳು ಅಸ್ವಸ್ಥರಾದ ಘಟನೆ ಹಾವೇರಿಯ ವೆಂಕಟಾಪುರ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ಬಿಸಿಯೂಟ ಸೇವಿಸಿದ್ದ 89 ಮಕ್ಕಳು ವಾಂತಿ ಭೇದಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ಟಿಡಿಪಿಎ ಅಂದಾನಪ್ಪ ವಡಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.