alex Certify ಕಣ್ಣಿನ ಆರೋಗ್ಯ ವೃದ್ಧಿಯಾಗಲು ಮಕ್ಕಳು ಸೇವಿಸಬೇಕು ಈ ಆಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣಿನ ಆರೋಗ್ಯ ವೃದ್ಧಿಯಾಗಲು ಮಕ್ಕಳು ಸೇವಿಸಬೇಕು ಈ ಆಹಾರ

ಮಕ್ಕಳು ಇಡೀ ದಿನ ಮೊಬೈಲ್ ನ್ನು ನೋಡುವುದರಿಂದ ಅವರ ಕಣ್ಣಿನಲ್ಲಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ಕೆಲವು ಮಕ್ಕಳು ಕಣ್ಣಿನ ದೃಷ್ಟಿಯನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಮಕ್ಕಳ ಕಣ್ಣಿನ ಆರೋಗ್ಯ ಕಾಪಾಡಲು ಈ ಆಹಾರಗಳನ್ನು ನೀಡಿ.

*ಏಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹದ ಉಷ್ಣತೆಯನ್ನು ಸಮತೋಲನಗೊಳಿಸುತ್ತದೆ. ಇದನ್ನು ಪ್ರತಿದಿನ ಸೇವಿಸಿದರೆ ಕಣ್ಣುಗಳು ತಂಪಾಗುತ್ತದೆ. ಇದನ್ನು ಹಾಲಿನಲ್ಲಿ ಬೆರೆಸಿ ಮಕ್ಕಳಿಗೆ ನೀಡಿ.

*ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಮಕ್ಕಳ ದೃಷ್ಟಿಗೆ ತುಂಬಾ ಉತ್ತಮ. ಹಾಗೇ ಇದು ಮಕ್ಕಳ ಕೂದಲು, ಚರ್ಮ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ಕಣ್ಣಿನ ಆರೈಕೆಗೆ ಕ್ಯಾರೆಟ್ ಉತ್ತಮವಾಗಿದೆ. ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ಕಣ್ಣಿನ ಕೋಶಗಳಿಗೆ ಹಾನಿಯಾಗುವುದನ್ನು ತಪ್ಪಿಸಿ ಕಣ್ಣಿನ ಸಮಸ್ಯೆಯನ್ನು ದೂರ ಮಾಡುತ್ತದೆ.

*ಬಾದಾಮಿಯಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಇದು ಕಣ್ಣಿನ ಕಾಯಿಲೆಯ ವಿರುದ್ಧ ಹೋರಾಡುತ್ತದೆ. ಇದನ್ನು ಪ್ರತಿದಿನ ನೆನೆಸಿ ಸಿಪ್ಪೆ ತೆಗೆದು ಮಕ್ಕಳಿಗೆ ತಿನ್ನಿಸಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...