ಯಾದಗಿರಿ: ಮಕ್ಕಳಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯ ಚಿರಂಜೀವಿ ನಗರದಲ್ಲಿ ನಡೆದಿದೆ.
38 ವರ್ಷದ ತಾಯಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. ಮಕ್ಕಳಾಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ 8 ವರ್ಷಗಳ ಹಿಂದೆ ಸೋದರ ಮಾವನ ಜೊತೆ ಮದುವೆಯಾಗಿತ್ತು. ಆದರೆ ಮಕ್ಕಳಾಗಿಲ್ಲ ಎಂಬ ಕೊರಗು ಇತ್ತು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಯಾದಗಿರಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.