ಚೀನಾದಲ್ಲಿ ಕೊರೋನಾ ವೈರಸ್ ಪತ್ತೆಯಾಗಿ ಇಂದಿಗೆ ಒಂದು ವರ್ಷ. ವುಹಾನ್ ಪ್ರಾಂತ್ಯದಲ್ಲಿ ಮೊದಲ ಕೇಸ್ ಪತ್ತೆಯಾಗಿ ಇಂದಿಗೆ ಒಂದು ವರ್ಷವಾಗಿದೆ.
ಚೀನಾದ ವುಹಾನ್ ಪ್ರಾಂತ್ಯದ 55 ವರ್ಷದ ವ್ಯಕ್ತಿಗೆ ಸೋಂಕು ತಗುಲಿತ್ತು. ಈ ವ್ಯಕ್ತಿ ಮಾರುಕಟ್ಟೆಗೆ ತೆರಳಿದ್ದ ಸಂದರ್ಭದಲ್ಲಿ ಸೋಂಕು ತಗುಲಿದ್ದು, ಕಳೆದ ಒಂದು ವರ್ಷದಲ್ಲಿ 5.5 ಕೋಟಿ ಜನರಿಗೆ ಕೊರೋನಾ ಸೋಂಕು ತಗುಲಿದೆ.
ನಂತರದಲ್ಲಿ ವ್ಯಾಪಿಸಿದ ಕೊರೋನಾ ವಿಶ್ವದೆಲ್ಲೆಡೆ ಆತಂಕ ಮೂಡಿಸಿದ್ದು, ಅಪಾರ ಸಂಖ್ಯೆಯ ಜನ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾ ತಡೆಯಲು ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ನಡೆದಿದ್ದು, ಅನೇಕ ಲಸಿಕೆಗಳು ಪ್ರಯೋಗದಲ್ಲಿ ಯಶಸ್ವಿಯಾಗಿವೆ. ಈ ಅವಧಿಯಲ್ಲಿ ಕೊರೋನಾದಿಂದ ಆದ ಪರಿಣಾಮ ಒಂದೆರಡಲ್ಲ.