alex Certify BIG NEWS: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಲವು ಸೂಚನೆ ನೀಡಲಾಗಿದೆ.

ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು.

ಸಾಬೂನು ಮತ್ತು ನೀರಿನಿಂದ ಆಗಾಗ ಕೈ ತೊಳೆಯಬೇಕು.

ಕಣ್ಣು, ಮೂಗು, ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸಿಕೊಳ್ಳಬಾರದು.

ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ, ಹೋಗುವುದಾದರೆ ಮಾಸ್ಕ್ ಬಳಸಬೇಕು.

ನಿದ್ದೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ, ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು.

ಸಾಕಷ್ಟು ನೀರು, ಪೌಷ್ಟಿಕ ಆಹಾರ ಸೇವಿಸಬೇಕು.

ಸಾರ್ವಜನಿಕವಾಗಿ ಉಗುಳಬಾರದು

ಇನ್ ಫ್ಲುಯೆಂಜಾ ಇತರೆ ಉಸಿರಾಟ ಕಾಯಿಲೆಗಳ ಹೆಚ್ಚಿನ ಸಂಭವ ಇರುವ ಸ್ಥಳಗಳಿಗೆ ಹೋಗಬೇಡಿ.

ರೋಗಲಕ್ಷಣ ಉಲ್ಬಣಗೊಂಡರೆ ಸಮೀಪದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ.

ವೈದ್ಯರನ್ನು ಸಂಪರ್ಕಿಸದೆ ಸ್ವಯಂ ಔಷಧಿಗಳನ್ನು ತೆಗೆದುಕೊಳ್ಳಬೇಡಿ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...