alex Certify ಚೀನಾದಲ್ಲಿ ಮತ್ತೆ ಕೋವಿಡ್​ ಅಬ್ಬರ: ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ನಡೆಸಿಕೊಂಡ ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೀನಾದಲ್ಲಿ ಮತ್ತೆ ಕೋವಿಡ್​ ಅಬ್ಬರ: ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ನಡೆಸಿಕೊಂಡ ವಿಡಿಯೋ ವೈರಲ್​

ಚೀನಾ: ಚೀನಾದಲ್ಲಿ ಮತ್ತೊಮ್ಮೆ ಕೋವಿಡ್​ ತಾಂಡವವಾಡುತ್ತಿದೆ. ಅದಕ್ಕೆ ಸಂಬಂಧಿಸಿದ ಹೊಸ ಆಘಾತಕಾರಿ ವಿಡಿಯೋ ಒಂದು ವೈರಲ್​ ಆಗಿದೆ. ಇದರಲ್ಲಿ ಕ್ವಾರಂಟೈನ್​ಗೆ ಹೋಗಲು ನಿರಾಕರಿಸಿದ ವ್ಯಕ್ತಿಯೊಬ್ಬನನ್ನು ಬಲವಂತವಾಗಿ ಮನೆಯಿಂದ ಹೊರಗೆ ಎಳೆದಿರುವುದು ಕಂಡುಬಂದಿದೆ.

ಕಟ್ಟುನಿಟ್ಟಾದ ಶೂನ್ಯ ಕೋವಿಡ್ ನೀತಿಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದರ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿವೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಚೀನಾ ನಿರ್ಬಂಧಗಳನ್ನು ತೆಗೆದುಹಾಕಿದ್ದು ವ್ಯವಹಾರಗಳನ್ನು ಮತ್ತೆ ತೆರೆಯಲು ಅನುಮತಿ ನೀಡಿದೆ. ಆದರೆ ಜನರ ಮೇಲೆ ಅಮಾನುಷವಾದ ದಬ್ಬಾಳಿಕೆ ನಡೆಯುತ್ತಿದ್ದು, ಅದಕ್ಕೊಂದು ಉದಾಹರಣೆ ಈ ವಿಡಿಯೋ.

ಚೀನಾ ದೇಶದಲ್ಲಿ 32,827 ಹೊಸ ಕೊರೋನಾ ವೈರಸ್​ ರೋಗಿಗಳ ಪತ್ತೆಯಾಗಿದ್ದಾರೆ. ಕಳೆದ ಶುಕ್ರವಾರ (ಡಿ.2) ವೇಳೆಗೆ, ಚೀನಾದಲ್ಲಿ 5,233 ಮಂದಿ ಕೋವಿಡ್​ನಿಂದ ಮೃತಪಟ್ಟಿದ್ದು, 331,952 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...